×
Ad

ಉಡುಪಿ ನಗರಸಭೆಯಿಂದ ಉದ್ಯೋಗ ಮೇಳ: 2000 ಮಂದಿ ನೋಂದಣಿ

Update: 2025-09-13 20:11 IST

ಉಡುಪಿ, ಸೆ.13: ಉಡುಪಿ ನಗರಸಭೆ ಹಾಗೂ ಮಲ್ಪೆಯ ಶ್ರೀಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಆಶ್ರಯದಲ್ಲಿ ಬೆಂಗಳೂರಿನ ಮೆಸರ್ಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.

ಮಾಹೆ ವಿವಿ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಭಾರತದ 140ಕೋಟಿ ಜನಸಂಖ್ಯೆಯಲ್ಲಿ ಶೇ.60ರಷ್ಟು ಯುವಜನರು 25 ವರ್ಷದೊಳಗಿನವರು ಆಗಿದ್ದಾರೆ. ನಿರುದ್ಯೋಗ ದೇಶದ ದೊಡ್ಡ ಸಮಸ್ಯೆಯಾಗಿದ್ದು ಅವಿಭಜಿತ ದ.ಕ. ಜಿಲ್ಲೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಮುಂದುವರಿದಿದೆ. ಅನಕ್ಷರತೆ, ಅನಾರೋಗ್ಯ ತೊಲಗಿದರೆ ಬಡತನ ನಿವಾರಣೆ ಸಾಧ್ಯವಾಗುತ್ತದೆ ಎಂದರು.

ಉದ್ಯೋಗ ಮೇಳವನ್ನು ಉದ್ಯಮಿ ಶ್ಯಾಮಿಲಿ ನವೀನ್ ಉದ್ಘಾಟಿಸಿದರು. ಬಿಲ್ಲಾಡಿ ಐಟಿಐ ಪ್ರಾಂಶುಪಾಲ ರೂಪೇಶ್ ಕುಮಾರ್, ಪಡುಬಿದ್ರಿ ಎಸ್ಪೆನ್ ವಿಶೇಷ ಆರ್ಥಿಕ ವಲಯದ ಮುಖ್ಯಸ್ಥ ಅಶೋಕ ಕುಮಾರ್, ಮಲ್ಪೆ ಶ್ರೀಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಮಿತಿಯ ಪಾಂಡುರಂಗ ಮಲ್ಪೆ, ಜ್ಞಾನೇಶ್ವರ ಕೋಟ್ಯಾನ್, ಹರಿಯಪ್ಪ ಕೋಟ್ಯಾನ್, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಸೋಜನ್, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಕೆನರಾ ಬ್ಯಾಂಕ್ ಎಜಿಎಂ ಸಂಜೀವ ಕುಮಾರ್, ನಗರಸಭೆ ಸದಸ್ಯೆ ರಶ್ಮಿ ಸಿ.ಭಟ್ ಉಪಸ್ಥಿತರಿದ್ದರು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಸ್ವಾಗತಿಸಿದರು. ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೆಂಗಳೂರಿನ ಮೆಸರ್ಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಸಂಸ್ಥೆಯ ನವೀನ್ ಕುಮಾರ್ ಉದ್ಯೋಗ ಮೇಳದ ಕುರಿತು ಮಾಹಿತಿ ನೀಡಿದರು. ಸತೀಶ್ಚಂದ್ರ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು. ಉದ್ಯೋಗ ಮೇಳ ದಲ್ಲಿ ಒಟ್ಟು 70ಕಂಪನಿ ಭಾಗಿಯಾಗಿದ್ದು, 2000 ವಿದ್ಯಾರ್ಥಿ, ಯುವಜನರ ನೋಂದಣಿ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News