ಮಕ್ಕಳ ದಿನಾಚರಣೆ: 20,000 ವಿದ್ಯಾರ್ಥಿಗಳಿಗೆ ಪೆನ್ ವಿತರಣೆ
ಸಾಂದರ್ಭಿಕ ಚಿತ್ರ
ಉಡುಪಿ, ನ.13: ಮಕ್ಕಳ ದಿನಾಚರಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಸುಮಾರು 20,000 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವೆಚ್ಚದಲ್ಲಿ ಪೆನ್ ವಿತರಣೆ ಮಾಡಲಾಗುವುದು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದ 127 ಶಾಲಾ ಕಾಲೇಜುಗಳಿಗೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.