×
Ad

ಮುಲ್ಕಿ ರೈಲು ನಿಲ್ದಾಣದಲ್ಲಿ ಕಾಮಗಾರಿ: ಫೆ.21ಕ್ಕೆ ರೈಲುಗಳ ಸಂಚಾರದಲ್ಲಿ ವ್ಯತ್ಯಯ

Update: 2025-02-18 20:07 IST

ಉಡುಪಿ, ಫೆ.18: ಕೊಂಕಣ ರೈಲ್ವೆ ಮಾರ್ಗದ ಮುಲ್ಕಿ ರೈಲು ನಿಲ್ದಾಣದಲ್ಲಿ ಫೆ.17ರಿಂದ 21ರವರೆಗೆ ತುರ್ತು ಕಾಮಗಾರಿಗಳು ನಡೆಯಲಿರುವುದ ರಿಂದ ಫೆ.21ರಂದು ಈ ಮಾರ್ಗದ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಫೆ.21 ಶುಕ್ರವಾರ ಬೆಳಗ್ಗೆ 7ರಿಂದ 10 ಗಂಟೆಯವರೆಗೆ ಕಾಮಗಾರಿ ನಡೆಯಲಿದ್ದು, ಈ ವೇಳೆ ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು 30 ನಿಮಿಷ ತಡೆ ಹಿಡಿಯಲಾಗುವುದು.

ಅಲ್ಲದೇ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು 20 ನಿಮಿಷಗಳ ಕಾಲ ತಡೆ ಹಿಡಿಯಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News