ಮೇ 21ರಂದು ರಾಜ್ಯ ಮಟ್ಟದ ಕಾರ್ಯಾಗಾರ
ಉಡುಪಿ, ಮೇ 20: ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆ ಬೆಂಗಳೂರು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇವರ ಸಹಯೋಗದಲ್ಲಿ ಉಪನ್ಯಾಸ ಕರು ಮತ್ತು ವಿದ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆಗಳ ಪ್ರಸ್ತುತತೆ- ರಾಜ್ಯ ಮಟ್ಟದ ಕಾರ್ಯಾಗಾರವು ಮೇ 21ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ.ಗಾಂವಕರ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಎಂ., ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ವಿಶ್ವನಾಥ, ಬಾರ್ಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತುತಿ ಸ್ನಾತಕೋತತಿರ ಅಧ್ಯಯನ ಕೇಂದ್ರದ ಡಾ.ಪ್ರಸಾದ್ ರಾವ್, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ.ಮೇವಿ ಮಿರಾಂದ, ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಸಂದೇಶ ಎಂ.ವಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.