×
Ad

ಜುಲೈ 21ರಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ ಕಾರ್ಯಕ್ರಮ

Update: 2025-07-16 19:34 IST

ಉಡುಪಿ, ಜು.16: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಜುಲೈ 21ರಿಂದ 23ರವರೆಗೆ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜುಲೈ 21ರಂದು ಸಂಜೆ ಉಡುಪಿಗೆ ಆಗಮಿಸಿ, ಸರಕಾರಿ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡಲಿರುವ ಡಾ.ಬಿಳಿಮಲೆ, ಜು.22ರಂದು ಬೆಳಗ್ಗೆ 9:30ಕ್ಕೆ ಸರಕಾರಿ ಅತಿಥಿಗೃಹದಲ್ಲಿ ಜಿಲ್ಲಾ ಕನ್ನಡ ಪರ ಸಂಘಟನೆ ಹಾಗೂ ಹೋರಾಟಗಾರರೊಂದಿಗೆ ಸಭೆ ನಡೆಸಲಿದ್ದಾರೆ. 11 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಭಾಗವಹಿಸುವರು.

ಸಂಜೆ 4 ಗಂಟೆಗೆ ನಗರದ ಬ್ರಹ್ಮಗಿರಿಯ ಭಾರತೀಯ ರೆಡ್‌ಕ್ರಾಸ್ ಭವನದಲ್ಲಿ ಡಾ. ಶಿವರಾಮ ಕಾರಂತರ ಬದುಕು ಮತ್ತು ಬರಹಗಳ ಪ್ರಸ್ತುತತೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸರಕಾರಿ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಜು.23ರಂದು ಬೆಳಗ್ಗೆ 9:30ಕ್ಕೆ ಕುಂದಾಪುರ ತಾಲೂಕು ಗುಲ್ವಾಡಿಯ ಸರ್ವೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ, ಬಳಿಕ ಕಾರವಾರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News