×
Ad

ಮೇ 21: ಮನೆಗೊಂದು ಗ್ರಂಥಾಲಯ ಕಾರ್ಯಕ್ರಮಕ್ಕೆ ಚಾಲನೆ

Update: 2026-05-20 20:29 IST

ಉಡುಪಿ, ಮೇ 20: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹಾಗೂ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ವಿನೂತನ ಕಾರ್ಯಕ್ರಮ ಮೇ 21ರ ಸಂಜೆ 5:15ಕ್ಕೆ ಉಡುಪಿಯ ಟೆಂಪಲ್ ಇನ್ ಹೋಮ್‌ಸ್ಟೇಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ಮಾನಸ ಉದ್ಘಾಟಿಸಲಿದ್ದಾರೆ. ಸಭೆಯ ಅಧ್ಯಕ್ಷತೆ ಯನ್ನು ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ. ವಹಿಸಲಿದ್ದಾರೆ. ಸಮಾರಂಭದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಹಾಗೂ ಅಪ್ನಾ ಹಾಲಿಡೇಸ್ ಆಡಳಿತ ನಿರ್ದೇಶಕ ನಾಗರಾಜ್ ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಪುಸ್ತಕ ಮನೆಗಳ ಭೇಟಿ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ ಎಂದು ಉಡುಪಿ ತಾಲೂಕು ಕಸಾಪದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News