ನ. 22ರಂದು ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ
ಕುಂದಾಪುರ, ನ.14: ಜಮೀಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ 2026-27ನೇ ಸಾಲಿನ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಕ್ರೀಡಾ ಕ್ಷೇತ್ರದ ಸಾಧಕರಿಗೆ ಅಭಿನಂದನಾ ಸಮಾರಂಭ ನ.22ರಂದು ಮಧ್ಯಾಹ್ನ 2.30ಕ್ಕೆ ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಯೂಸುಫಿಯ ಸಭಾಂಗಣದಲ್ಲಿ ನಡೆಯಲಿದೆ.
ಕಂಬದಕೋಣೆ ಸರಕಾರಿ ಹಿ.ಪ್ರಾ. ಶಾಲೆ ಮುಖ್ಯೋಪಾಧ್ಯಾಯ ಮಹಾಬಲ ಕೆ.ಮರವಂತೆ, ಚಿತ್ತೂರಿನ ಪಿಎಂಶ್ರೀ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ಶೆಟ್ಟಿ, ಕೋಡಿ ಬ್ಯಾರಿಸ್ ಬಿಎಡ್- ಡಿಎಡ್ ಕಾಲೇಜು ಪ್ರಾಂಶುಪಾಲೆ ಡಾ.ಫೀರ್ದೋಸ್, ಕಾಳಾವರ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮುಸ್ರತ್ ಜಹಾಂನ್ ಅಕ್ಬರ್ ಎಂ., ಗಂಗೊಳ್ಳಿ ಸರಕಾರಿ ಉರ್ದು ಹಿ.ಪ್ರಾ. ಶಾಲೆಯ ಶಿಕ್ಷಕಿ ಹೇಮಾವತಿ ಅವರಿಗೆ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ ಪ್ರದಾನ ಹಾಗೂ ಆತ್ಲೇಟಿಕ್ಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚಿದ ವಡೇರಹೋಬಳಿಯ ಪಿಎಂಶ್ರೀ ಸರಕಾರಿ ಪ್ರೌಢಶಾಲೆಯ ವಿಠ್ಠಲ ಬಾಳಪ್ಪ ಮುನವಳ್ಳಿ ಅವರಿಗೆ ಅಭಿನಂದನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.