×
Ad

ಉಡುಪಿ: ಆ.24ರಂದು ರಕ್ತದಾನ ಶಿಬಿರ

Update: 2025-08-22 19:44 IST

ಉಡುಪಿ, ಆ.22: ಉಡುಪಿ ಬ್ರಹ್ಮಕುಮಾರೀಸ್ ಇವರಿಂದ ಮೊದಲ ಬಾರಿಗೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಮತ್ತು ಕುಂದಾಪುರ ತಾಲೂಕು ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬ್ರಹ್ಮಗಿರಿಯಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಆ.24ರ ರವಿವಾರ ಬೆಳಿಗ್ಗೆ 9 ಗಂಟೆಯಿಂದ ಅಪರಾಹ್ನ 2  ಗಂಟೆಯವರೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ರಾಜಯೋಗಿನಿ ದಾದಿ ಪ್ರಕಾಶಮಣಿಜೀ ಇವರ ಸ್ಮರಣಾರ್ಥ ವಿಶ್ವ ಬಂಧುತ್ವ ದಿನದ ಅಂಗವಾಗಿ ಈ ಬೃಹತ್ ರಕ್ತದಾನ ಅಭಿಯಾನವನ್ನು ದೇಶದಾದ್ಯಂತ ನಡೆಸಲಾಗುತ್ತಿದೆ. ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಬ್ರಹ್ಮ ಕುಮಾರೀಸ್ ಉಡುಪಿ ಸಂಚಾಲಕಿ ಬಿ. ಕೆ ಸುಮಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬ್ರಹ್ಮಕುಮಾರೀಸ್ ಉಡುಪಿ ಮತ್ತು ರೆಡ್‌ಕ್ರಾಸ್ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News