ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಅವಗಣನೆ: ಜು. 25ರಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ
ಉಡುಪಿ: ಮಂಗಳವಾರ ಮಂಡಿಸಲಾದ ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣ ಅವಗಣನೆಮಾಡಿದ ಕೇಂದ್ರ ಸರಕಾರದ ಕ್ರಮದ ವಿರುದ್ಥ ಜಿಲ್ಲಾ ಕಾಂಗ್ರೆಸ್ ಸಮಿತಿ ನಾಳೆ ಬೆಳಗ್ಗೆ 11.30ಕ್ಕೆ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.
ಇದಕ್ಕೆ ಮುನ್ನ ಬೆಳಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯು ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿ ಅಧ್ಯಕ್ಷ ವಿನಯ್‌ಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗಪೂರ್, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಹಾಗೂ ಎಂ.ಸುಕುಮಾರ್ ಶೆಟ್ಟಿ , ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ ಹಾಗೂ ಪಕ್ಷದ ಮುಖಂಡರಾದ ಉದಯಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.