ಕಾಪು, ನ.7: ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಉಡುಪಿ ವತಿಯಿಂದ ಕಟಪಾಡಿ ಪ್ರಜಾಸೇವಾ ಆಂದೋಲನ ಸಭೆ ಶಂಕರಪುರ ಸೈಂಟ್ ಜೋನ್ಸ್ ಚರ್ಚ್ ಕಮಿಟಿ ಹಾಲ್ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಒಟ್ಟು 25 ಅರ್ಜಿಗಳನ್ನು ಸ್ವೀಕರಿಸಲಾ ಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ತಹಶೀಲ್ದಾರ ಅಂನತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯ ಕುಮಾರ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ, ಕಟಪಾಡಿ ಗ್ರಾಪಂ ಆಡಳಿತಾಧಿಕಾರಿ ಗುರುಪ್ರಸಾದ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿಲಕ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor