ಜೂ. 26ರಂದು ನಶಾ ಮುಕ್ತ ಭಾರತ ಅಭಿಯಾನದ ಮಾಹಿತಿ ಕಾರ್ಯಾಗಾರ
Update: 2024-06-25 21:32 IST
ಉಡುಪಿ, ಜೂ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಾಣೆ ವಿರುದ್ಧ ಅಂತಾರಾಷ್ಟ್ರೀಯ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರವು ಜೂನ್ 26ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯು.ಜಿ. ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.