ಉಡುಪಿ: ಜೂ.28ರಂದು ವಕೀಲರ ಸಂಘದಿಂದ ಹೊಸ ಕ್ರಿಮಿನಲ್ ಕಾಯ್ದೆಗಳ ಬಗ್ಗೆ ಸಂವಾದ
Update: 2024-06-27 21:05 IST
ಉಡುಪಿ, ಜೂ.27: ಉಡುಪಿ ವಕೀಲರ ಸಂಘದ ವತಿಯಿಂದ ಇದೇ ಜು.1ರಿಂದ ನೂತನವಾಗಿ ಜಾರಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತ -2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ-2024ರ ಕುರಿತು ವಿಚಾರಸಂಕಿರಣ ವೊಂದನ್ನು ಜೂ.28ರ ಶುಕ್ರವಾರ ಸಂಜೆ4ಗಂಟೆಗೆ ನ್ಯಾಯಾಲಯ ಆವರಣದಲ್ಲಿರುವ ವಕೀಲರ ಸಂಘದ ಸಭಾಂಗಣದಲ್ಲಿ ಆಯೋಜಿಸಿದೆ.
ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ನಿರ್ದೇಶಕರಾಗಿರುವ ಡಾ.ನಿರ್ಮಲಾ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿಗಳಾದ ಎಂ.ಶಾಂತಾರಾಮ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಹೊಸ ಕಾನೂನಿನ ಕುರಿತಂತೆ ಆಸಕ್ತಿ ಹೊಂದಿರುವ ಎಲ್ಲರೂ ಇದರಲ್ಲಿ ಪಾಲ್ಗೊಳ್ಳುವಂತೆ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.