ಕುಂದಾಪುರ: 3ನೇ ಹೆಚ್ಚುವರಿ ಕಿರಿಯ ಜೆಎಂಎಫ್‌ಸಿ ಕೋರ್ಟ್ ಉದ್ಘಾಟನೆ

Update: 2026-07-21 21:25 IST

ಕುಂದಾಪುರ, ಜು.21: ಇಲ್ಲಿನ ನ್ಯಾಯಾಲಯದ ಸಂಕೀರ್ಣದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಮೂರನೇ ಹೆಚ್ಚುವರಿ ಕಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು.

ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅವರು ನೂತನ ನ್ಯಾಯಾಲಯವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್, ಕುಂದಾಪುರದ ವಿವಿಧ ಕೋರ್ಟ್‌ಗಳ ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಜಿ., ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮಂಜುಳಾ, ಒಂದನೇ ಹೆಚ್ಚುವರಿ ಕಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ, ಎರಡನೇ ಹೆಚ್ಚುವರಿ ಕಿರಿಯ ಸಿವಿಲ್ ನ್ಯಾಯಾಧೀಶೆ ಸೈದಾ ಕಶ್ಮಿರ್ ಸಿಮ್ರಾನ್, ಹೊಸದಾಗಿ ಆರಂಭಗೊಂಡ 3ನೇ ಹೆಚ್ಚುವರಿ ಕಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಣಿಕಂಠ ಎಂ.ಎಸ್. ಭಾಗವಹಿಸಿದ್ದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಜೆ. ಶ್ರೀನಾಥ್ ರಾವ್, ಕಾರ್ಯದರ್ಶಿ ಪಿ.ಜಯಚಂದ್ರ ಶೆಟ್ಟಿ, ಉಪಾಧ್ಯಕ್ಷೆ ಸುಮನಾ, ಕೋಶಾಧಿಕಾರಿ ದಿವ್ಯಾ, ಜತೆ ಕಾರ್ಯದರ್ಶಿ ಚರಣ್, ಕ್ರೀಡಾ ಕಾರ್ಯದರ್ಶಿ ಸಜನ್ ಎಂ.ಎಸ್., ಸಾಂಸ್ಕೃತಿಕ ಕಾರ್ಯದರ್ಶಿ ಗುರುಪ್ರಸಾದ್ ಭಟ್, ಹಿರಿಯ ವಕೀಲರಾದ ಟಿ.ಬಿ. ಶೆಟ್ಟಿ, ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಮಟ್ಟಿ ಹರೀಶ್, ಲಕ್ಷ್ಮಣ್ ಶೆಟ್ಟಿ, ಭುಜಂಗ ಶೆಟ್ಟಿ ಗಾವಳಿ, ಬನ್ನಾಡಿ ಸೋಮನಾಥ ಹೆಗ್ಡೆ, ವಕೀಲರು, ನ್ಯಾಯಾಲಯದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News