’ಸ್ವಚ್ಛ ಕಡಲ ತೀರ - ಹಸಿರು ಕೋಡಿ’ 30ನೇ ಅಭಿಯಾನ

Update: 2024-04-28 13:35 GMT

ಕುಂದಾಪುರ, ಎ.28: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 30ನೇ ’ಸ್ವಚ್ಛ ಕಡಲ ತೀರ- ಹಸಿರು ಕೋಡಿ’ ಅಭಿಯಾನ ಯಶಸ್ವಿಯಾಗಿ ಜರುಗಿತು.

ಅಭಿಯಾನಕ್ಕೆ ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುರ‌್ರಹ್ಮಾನ್‌ ಅವರು ಚಾಲನೆ ನೀಡಿದರು. ಸಂಸ್ಥೆಯ ವಿಶ್ವಸ್ಥ ಮಂಡಳಿಯ ಸದಸ್ಯ ಡಾ. ಆಸಿಫ್ ಬ್ಯಾರಿ, ಸಲಹಾ ಮಂಡಳಿಯ ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಕೋಡಿ ಊರಿನ ಮುಖಂಡರು ಹಾಗೂ ನಾಗರಿಕರು, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸ್ವಚ್ಛತಾ ಅಭಿಯಾನಕ್ಕೆ ಕುಂದಾಪುರ ಪುರಸಭೆಯ ಅಧ್ಯಕ್ಷರು, ಮುಖ್ಯಾಧಿಕಾರಿಗಳು, ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಸಹಕಾರ ನೀಡಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News