×
Ad

ಗಾಂಧಿ ಆಸ್ಪತ್ರೆಗೆ 30ರ ಸಂಭ್ರಮ: ಸ್ವಯಂಪ್ರೇರಿತ ರಕ್ತದಾನ ಶಿಬಿರ

Update: 2025-05-04 17:44 IST

ಉಡುಪಿ, ಮೇ 4: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರವನ್ನು ಆಸ್ಪತ್ರೆಯ ಲಹರಿ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿತ್ತು.

ಶಿಬಿರವನ್ನು ಉದ್ಘಾಟಿಸಿದ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮಾತನಾಡಿ, ಸಮಾಜ ದಿಂದ ಪಡೆದುದನ್ನು ಸಮಾಜಕ್ಕೆ ಹಂಚುವ ಕೆಲಸವನ್ನು ಗಾಂಧಿ ಆಸ್ಪತ್ರೆ ಮಾಡುತ್ತಿದೆ. ನಗರಸಭೆ ಜೊತೆ ಗಾಂಧಿ ಆಸ್ಪತ್ರೆ ಕೈಜೋಡಿಸಿದ್ದು ಎಂ.ಹರಿಶ್ಚಂದ್ರರ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದು ತಿಳಿಸಿದರು.

ಉಡುಪಿ ನಗರಸಭೆ ಪೌರಾಯುಕ್ತ ಡಾ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಆರೋಗ್ಯ, ಶಿಕ್ಷಣ, ಆದಾಯದ ಆಧಾರದಲ್ಲಿ ಮಾನವ ಅಭಿವೃದ್ಧಿ ಅಳತೆಗೋಲಾಗಿದ್ದು ಮಡಾಮಕ್ಕಿಯಂತಹ ಕುಗ್ರಾಮದಿಂದ ಬಂದ ಎಂ. ಹರಿಶ್ಚಂದ್ರರ ಸಾಧನೆ ಅನ್ಯರಿಗೆ ಮಾದರಿ ಎಂದು ಹೇಳಿದರು.

ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್.ಜಯಪ್ರಕಾಶ್ ಕೆದ್ಲಾಯ ಮಾತನಾಡಿದರು. ಗಾಂಧಿ ಆಸ್ಪತ್ರೆ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಆಸ್ಪತ್ರೆಯಲ್ಲಿ ಜನಿಸಿದ, ನಾನಾ ಕ್ಷೇತ್ರದ ಸಾಧಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗೌರವಿಸಲಾಯಿತು.

ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಎಜಿಎಂ ವಾದಿರಾಜ ಭಟ್, ಲಕ್ಷ್ಮೀ ಹರಿಶ್ಚಂದ್ರ, ಡಾ.ಪಂಚಮಿ, ಡಾ.ವಿದ್ಯಾ ವಿ.ತಂತ್ರಿ ಉಪಸ್ಥಿತರಿದ್ದರು. ಗಾಂಧಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ ಪ್ರಾಸ್ತಾವಿಕ ಮಾತನಾಡಿದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಸುಮಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News