×
Ad

ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಆ.31ರಂದು ಉಡುಪಿ ಜಿಲ್ಲಾ ಮಟ್ಟದ ಮ್ಯಾರಥಾನ್

Update: 2025-08-29 21:27 IST

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು (ಎನ್ಸೆಸ್ಸೆಸ್) ಅಜ್ಜರಕಾಡು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿ ಯೂರು ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಶಿಯೇಷನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹೆಚ್.ಐ.ವಿ /ಏಡ್ಸ್ ಕುರಿತು ಜನ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಮಟ್ಟದ ೫ ಕಿ.ಮೀ. ಮ್ಯಾರಾಥಾನ್ ಸ್ಪರ್ಧೆ ಆ.31ರಂದು ರವಿವಾರ ಮುಂಜಾನೆ ನಡೆಯಲಿದೆ.

ಮ್ಯಾರಥಾನ್ ಸ್ಪರ್ಧೆಗೆ ರವಿವಾರ ಬೆಳಗ್ಗೆ 7 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಚಾಲನೆ ನೀಡಲಿದ್ದಾರೆ. ಜಿಲ್ಲೆಯ 17ರಿಂದ 25 ವರ್ಷ ದೊಳಗಿನ ಕಾಲೇಜು ವಿದ್ಯಾರ್ಥಿಗಳು ಮಾತ್ರ ಮ್ಯಾರಾಥಾನ್‌ನಲ್ಲಿ ಭಾಗವಹಿಸಬಹುದು.

ಸ್ಪರ್ಧೆಯಲ್ಲಿ ಪ್ರತಿ ಕಾಲೇಜಿನಿಂದ ಕನಿಷ್ಠ ೪ (ತಲಾ ಇಬ್ಬರು ಪುರುಷ ಮತ್ತು ಮಹಿಳೆಯರು) ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ಸ್ಪರ್ಧಾಳುಗಳು ಗೂಗಲ್ ಆನ್‌ಲೈನ್ ಲಿಂಕ್ - https://forms.gle/bWVFatdBsDnBkjCu7- ಮೂಲಕ ಹೆಸರು ನೋಂದಾಯಿಸಿ ಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಡ್ಯಾಪ್ಕೂ ಜಿಲ್ಲಾ ಮೇಲ್ವಿಚಾರಕ ಮಹಾಬಲೇಶ್ವರ ಮೊ.ನಂ:9480579398 ಅಥವಾ 9449846988ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News