ಅ. 31ರಂದು ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
ಉಡುಪಿ, ಅ.29: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ಅ. 31ರಂದು ನಡೆಯಲಿದೆ.
ಅ.31ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಸಿದ್ದಿವಿನಾಯಕ ಮಂದಿರದಲ್ಲಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ, ಬ್ರಹ್ಮಾವರ ತಾಲೂಕು ನೀಲಾವರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ, ಮಣಿಪುರ ಗ್ರಾಮದ ನಾರಾಯಣಗುರು ಧರ್ಮಪರಿಪಾಲನಾ ಸಂಘದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಬೈಂದೂರು ತಾಲೂಕು ಕರಿಕಟ್ಟೆ ಶಿರೂರು ಗ್ರಾಮದ ದುರ್ಗಾಂಬಿಕಾ ಸಭಾಭವನದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ಹಾಗೂ ಅಂದು ಅಪರಾಹ್ನ 2:30ಕ್ಕೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ನಿವೇದಿತಾ ಪ್ರೌಢಶಾಲೆ ಸಭಾಂಗಣದಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲು ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.