×
Ad

ಉಡುಪಿ: 36 ವರ್ಷಗಳ ಹಳೆ ಪ್ರಕರಣದ ಆರೋಪಿ ಬಂಧನ

Update: 2024-07-26 21:27 IST

ಚಿನ್ನುವಾಡು

ಉಡುಪಿ, ಜು.26: 36 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಡುಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಚಿನ್ನುವಾಡು (55) ಬಂಧಿತ ಆರೋಪಿ. ಈತನ ವಿರುದ್ಧ ಶ್ರೀಗಂಧ ಕಳ್ಳತನಕ್ಕೆ ಸಂಬಂಧಿಸಿ 1990ರಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು 34 ವರ್ಷಗಳ ನಂತರ ಖಚಿತ ಮಾಹಿತಿಯಂತೆ ಪೊಲೀಸರು ಆರೋಪಿಯನ್ನು ಹೊಳೆಹೊನ್ನೂರು ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿ ಬಂಧಿಸಿದರು.

ಉಡುಪಿ ನಗರ ಠಾಣೆಯ ಸಿಬ್ಬಂದಿ ಶಿವಕುಮಾರ್ ಹಾಗೂ ಹೇಮಂತ್ ಕುಮಾರ್ ಆರೋಪಿಯನ್ನು ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ. ಅದರಂತೆ ಆತನನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News