×
Ad

ಮಹಿಳೆಗೆ 4 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

Update: 2026-06-23 22:09 IST

ಹಿರಿಯಡ್ಕ, ಜೂ.23: ಮಹಿಳೆಯೊಬ್ಬರಿಗೆ ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಶೀಲಾವತಿ ಎಂಬವರ ಮೊಬೈಲ್‌ಗೆ ಕಳೆದ 2 ತಿಂಗಳುಗಳ ಹಿಂದೆ ಅಪರಿಚಿತರು ವೆಬ್‌ಸೈಟ್ ಲಿಂಕ್ ಕಳುಹಿಸಿ, ಇದರಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಕೊಡುವುದಾಗಿ ನಂಬಿಸಿದ್ದರು. ಅದರಂತೆ ಶೀಲಾವತಿ ಹಂತ ಹಂತವಾಗಿ 4,02,000ರೂ. ಹಣವನ್ನು ಹೂಡಿಕೆ ಮಾಡಿದ್ದರು. ನಂತರ ಸ್ವಲ್ಪ ಹಣವನ್ನು ಆರೋಪಿಗಳು ವಾಪಾಸ್ಸು ನೀಡಿದ್ದರು. ಉಳಿದ 3,50,000ರೂ. ಹಣವನ್ನು ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News