×
Ad

ಮಹಿಳೆಗೆ 4.20 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

Update: 2025-10-04 22:35 IST

ಉಡುಪಿ, ಅ.4: ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿ ಮಹಿಳೆಯೊಬ್ಬರು ಲಕ್ಷಾಂತರ ರೂ. ಆನ್‌ಲೈನ್ ವಂಚನೆಗೆ ಒಳಗಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

76 ಬಡಗುಬೆಟ್ಟು ನಿವಾಸಿ ನಾಝಿಯಾ(39) ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭವನ್ನು ಗಳಿಸಬಹುದಾದ ಜಾಹೀರಾತನ್ನು ವೀಕ್ಷಿಸಿದ್ದು, ನಂತರ ಪ್ರೋಫೈಲ್ ವ್ಯಕ್ತಿಗೆ ಹೂಡಿಕೆ ಮಾಡುವ ಬಗ್ಗೆ ತಿಳಿಯಲು ಸಂದೇಶವನ್ನು ಕಳುಹಿಸಿದ್ದರು. ನಂತರ ಸಂಪರ್ಕಿಸಿದ ಆರೋಪಿಗಳು, ಟ್ರೇಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ತಿಳಿಸಿದ್ದರು.

ಅದನ್ನು ನಂಬಿದ ಇವರು, ವಿವಿಧ ಹಂತಗಳಲ್ಲಿ ಒಟ್ಟು 4,20,651ರೂ. ಹಣವನ್ನು ಪಾವತಿಸಿದ್ದರು. ಆದರೆ ಆರೋಪಿಗಳು ಹಣ ವಾಪಾಸ್ಸು ನೀಡದೆ ವಂಚಿಸಿರುವುದಾಗಿ ದೂರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News