×
Ad

ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆ

Update: 2025-07-14 18:40 IST

ಉಡುಪಿ, ಜು.14: ಉಡುಪಿ ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜು.12ರಂದು ಜರಗಿತು.

ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ವಹಿಸಿದ್ದರು. ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಅನುಕ್ರಮವಾಗಿ ಜತೆ ಕಾರ್ಯದರ್ಶಿ ನಾರಾಯಣ ಎಂ.ಹೆಗಡೆ, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ.ಕೆ.ಸದಾಶಿವ ರಾವ್ ಮಾಡಿದರು. ಅನಂತರ ಕಾರ್ಯ ಕಾರೀ ಸಮಿತಿ ಮತುತಿ ಸಲಹಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಲೆಕ್ಕಪರಿಶೋಧಕರಾಗಿ ಸಿಎ ಅರುಣ್ ನಾಯಕ್‌ರನ್ನು ನೇಮಕಗೊಳಿಸಲಾಯಿತು.

ಅಗಲಿದ ಸಂಸ್ಥೆಯ ಸದಸ್ಯರು ಹಾಗೂ ಕಲಾವಿದರಿಗೆ ನುಡಿನಮನ ಸಲ್ಲಿಸಲಾಯಿತು. ಉಪಾಧ್ಯಕ್ಷ ಪಿ.ಕಿಶನ್ ಹೆಗ್ಡೆ ಉಪಸ್ಥಿತರಿದ್ದರು. ಉಪಾಧ್ಯಕ್ಷ ಎಸ್.ವಿ.ಭಟ್ ಸ್ವಾಗತಿಸಿದರು. ವಿದ್ಯಾಪ್ರಸಾದ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News