×
Ad

ಶಕ್ತಿ ಯೋಜನೆಯಡಿ 500ಕೋಟಿ ಮಂದಿ ಪ್ರಯಾಣ: ಕುಂದಾಪುರದಲ್ಲಿ ಸಂಭ್ರಮಾಚರಣೆ

Update: 2025-07-14 18:37 IST

ಕುಂದಾಪುರ: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ತಲುಪಿದ ಹಿನ್ನೆಲೆಯಲ್ಲಿ ಸೋಮವಾರ ಕುಂದಾಪುರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಸ ಲಾಯಿತು.

ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ದಿನೇಶ್ ಹೆಗ್ಡೆ ಎಂ.ಮೊಳಹಳ್ಳಿ ಮಾತನಾಡಿ, ರಾಜ್ಯ ಸರಕಾರವು ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ. ದೇಶದ ಇತಿಹಾಸದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರವು ಯಶಸ್ವಿಯಾಗಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುತ್ತಿರುವುದು. ಯಾವುದೇ ಕಾರಣಕ್ಕೆ ಯೋಜನೆ ನಿಲ್ಲುವುದಿಲ್ಲ ಎಂದು ಹೇಳಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿದರು. ಉಡುಪಿಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ವಾಗಿ ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದ ಕಾರ್ಯಕರ್ತರನ್ನು ಕುಂದಾಪುರದಲ್ಲಿ ಬರಮಾಡಿಕೊಂಡು ಹೂ ನೀಡಿ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

ಕೆಎಸ್‌ಆರ್‌ಟಿಸಿ ಡಿಪ್ಪೋ ಮೆನೆಜರ್ ಉದಯ ಕುಮಾರ್ ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಗೀತಾ ವಾಗ್ಳೆ, ಗ್ಯಾರಂಟಿ ಸಮಿತಿಯ ಸದಸ್ಯರಾದ ಅಭಿಜಿತ್ ಪೂಜಾರಿ, ವಾಣಿ ಶೆಟ್ಟಿ, ಆಶಾ ಕರ್ವಾಲೊ, ನಾರಾಯಣ ಆಚಾರ್ ಕೋಣಿ, ಜಹೀರ್ ಅಹ್ಮದ್, ಪ್ರಾಧಿಕಾರದ ಸದಸ್ಯ ಚಂದ್ರ ಅಮೀನ್, ಕೆಡಿಪಿ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ, ಕಾಂಗ್ರೆಸ್ ಮುಖಂಡರಾದ ವಿಕಾಸ್ ಹೆಗ್ಡೆ, ಸರಸು ಬಂಗೇರ, ಶೋಭಾ ಪುತ್ರನ್, ಜಾನಕಿ ಬಿಲ್ಲವ ಕೋಟೇಶ್ವರ, ರೋಶನ್ ಕುಮಾರ್ ಶೆಟ್ಟಿ, ಅಶೋಕ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News