ರಾಣಿ ಅಬ್ಬಕ್ಕ 500ನೇ ಜಯಂತಿ ಆಚರಣೆ: ಛದ್ಮ ವೇಷ ಸ್ಪರ್ಧೆ
ಉಡುಪಿ, ಸೆ.20: ಪ್ರಧಾನಿ ನರೇಂದ್ರ ಮೋದೀಜಿ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಕಾರ್ಯ ಕ್ರಮದ ಭಾಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಹೋರಾಟ ಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕ ಅವರ 500ನೇ ಜಯಂತಿ ಹಾಗೂ ಮಹಿಳೆಯರಿಗೆ ರಾಣಿ ಅಬ್ಬಕ್ಕ ಬಗ್ಗೆ ಛದ್ಮ ವೇಷ ಸ್ಪರ್ಧೆಗಳನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತೆ ರಂಗ ಕಲಾವಿದೆ ಸಂಧ್ಯಾ ಶೆಣೈ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಕಾರ್ಯಕರ್ತರಾದ ಸಾವಿತ್ರಮ್ಮ, ವಸಂತಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ಉಪಸ್ಥಿತರಿದ್ದರು. ನಂತರ ಛದ್ಮ ವೇಷ ಸ್ಪರ್ಧೆಗಳು ಜರಗಿದವು
ನಿರ್ಮಲಾ ಶೆಟ್ಟಿ ವಂದಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪವಿತ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.