×
Ad

ಉಡುಪಿ: ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ

Update: 2026-07-15 21:41 IST

ಉಡುಪಿ, ಜು.15: ಉಡುಪಿಯ ಯಕ್ಷಗಾನ ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಇರುವ ಯಕ್ಷಗಾನ ಕಲಾರಂಗ ಉಡುಪಿ ಇದರ 51ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಎಂ. ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರುಗಿತು.

ಸಭೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಅತಿಥಿಗಳನ್ನು ಸ್ವಾಗತಿಸಿದರು. ಅಗಲಿದ ಸದಸ್ಯರಿಗೆ, ಕಲಾವಿ ದರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಗತ ಮಹಾಸಭೆಯ ವರದಿ ವಾಚಿಸಿದರು.

ಕಾರ್ಯದರ್ಶಿ ಮುರಲಿ ಕಡೆಕಾರ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ 2025-26ರ ಪರಿಶೋಧಿತ ಲೆಕ್ಕಪತ್ರ ಮಂಡಿಸಿದರು. 2026-27ನೇ ಸಾಲಿಗೆ ಸಿಎ ಅರುಣ್ ನಾಯಕರನ್ನು ಲೆಕ್ಕ ಪರಿಶೋಧಕರನ್ನಾಗಿ ನೇಮಕ ಮಾಡಲಾುತು. ಈ ಎಲ್ಲಾ ಕಲಾಪಗಳು ಸದಸ್ಯರ ಸೂಚನೆ, ಅನುಮೋದನೆ ಗಳೊಂದಿಗೆ ಅಂಗೀಕಾರಗೊಂಡವು.

2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಆಹ್ವಾನಿತ ಸದಸ್ಯರನ್ನು ಸಹ ಆಯ್ಕೆ ಮಾಡಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ.ಜಿ.ಶೆಟ್ಟಿ ಮಾತನಾ ಡಿದರು. ಅಧ್ಯಕ್ಷೀಯ ಭಾಷಣದ ನಂತರ ಜತೆಕಾರ್ಯದರ್ಶಿ ವಿದ್ಯಾಪ್ರಸಾದ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News