×
Ad

ಪರ್ಕಳ ರಸ್ತೆಗಳ ದುರಾವಸ್ಥೆ ವಿರುದ್ಧ ಜು.6ರಂದು ಪ್ರತಿಭಟನೆ

Update: 2025-07-04 21:51 IST

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಕೆಳಪರ್ಕಳ ಭಾಗದಲ್ಲಿ ರಸ್ತೆಯ ದುರಾವಸ್ಥೆಯನ್ನು ಖಂಡಿಸಿ, ಕೂಡಲೇ ಅದನ್ನು ಸಂಚಾರ ಯೋಗ್ಯವನ್ನಾಗಿ ಮಾಡುವಂತೆ ಆಗ್ರಹಿಸಿ ಪರ್ಕಳ ರಸ್ತೆ ಹೋರಾಟ ಸಮಿತಿಯ ವತಿಯಿಂದ ಜು.6ರಂದು ಸಾರ್ವಜನಿಕರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ.

ಪರ್ಕಳ ಪ್ರದೇಶದ ರಸ್ತೆಗಳ ಹದಗೆಟ್ಟ ಸ್ಥಿತಿಯಿಂದ ಸಾರ್ವಜನಿಕರು ತೀವ್ರ ವಾದ ತೊಂದರೆ ಅನುಭವಿಸು ತಿದ್ದಾರೆ. ಸತತ ಮಳೆಯ ಕಾರಣ ದಿನದಿಂದ ದಿನಕ್ಕೆ ರಸ್ತೆ ಪರಿಸ್ಥಿತಿ ಹದಗೆಡುತ್ತಿದ್ದು, ಸಂಚಾರಕ್ಕೆ ಬಳಸಲು ಅಸಮರ್ಥ ವಾಗಿದೆ.ಇದರಿಂದ ಅಪಘಾತಗಳು ಹೆಚ್ಚಾಗುತ್ತಿದೆ ಹಾಗೂ ದಿನನಿತ್ಯ ಸಂಚರಿಸು ವವರಿಗೆ ಅನೇಕ ತೊಂದರೆಗಳು ಎದುರಾಗುತ್ತಿವೆ ಎಂದು ಸ್ಥಳೀಯರು, ರಸ್ತೆ ಬಳಕೆದಾರರು, ವಾಹನ ಚಾಲಕರು ತಿಳಿಸಿದ್ದಾರೆ.

ಪ್ರಸ್ತುತ, ಪರ್ಕಳದ ಹಳೆಯ ರಸ್ತೆಯ ದುರಸ್ತಿ ಹಾಗೂ ನಿರ್ವಹಣೆ ತುರ್ತು ಅಗತ್ಯವಾಗಿದೆ ಎಂಬುದು ಸಾರ್ವಜನಿಕರ ಮುಖ್ಯ ಬೇಡಿಕೆಯಾಗಿದೆ. ನಾವು ಬಳಸುತ್ತಿರುವ ಹಳೆಯ ರಸ್ತೆಯ ದುರಸ್ತಿ ಮತ್ತು ನಿರ್ವಹಣೆ ಮಾತ್ರ ನಮ್ಮ ಬೇಡಿಕೆ. ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ರಸ್ತೆಯ ಭಾಗಕ್ಕೆ ನಮ್ಮ ಬೇಡಿಕೆಗಳು ಸಂಬಂಧಪಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಒಪ್ಪಂದದ ಪ್ರಕಾರ, ಹೊಸ ರಸ್ತೆ ನಿರ್ಮಾಣವಾಗುವವರೆಗೆ ಹಳೆಯ ರಸ್ತೆಯ ನಿರ್ವಹಣೆ ಗುತ್ತಿಗೆದಾರರ ಜವಾಬ್ದಾರಿ ಎಂದು ಒಪ್ಪಂದದಲ್ಲಿ ಇದೆ. ಆದರೆ ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಂದದ ಜವಾಬ್ದಾರಿಗಳನ್ನು ಪಾಲಿಸಲು ಬಲವಂತಗೊಳಿಸಲು ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ, ಇಲ್ಲಿನ ನಗರ ಸಭಾ ಸದಸ್ಯೆ ಸುಮಿತ್ರಾ ನಾಯಕ್ ಮಧ್ಯಸ್ಥಿಕೆ ವಹಿಸಿ, ಗುತ್ತಿಗೆದಾರರು ತಮ್ಮ ಜವಾಬ್ದಾರಿಗಳನ್ನು ತಕ್ಷಣ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಜುಲೈ 6ರಂದು ಪರ್ಕಳದಲ್ಲಿ ಸಾರ್ವಜನಿಕ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಪರ್ಕಳದ ಶ್ರೀನಾರಾಯಣಗುರು ಮಂದಿರಕ್ಕೆ ಹೋಗುವ ತಿರುವಿನಲ್ಲಿ ಬೆಳಗ್ಗೆ 8 ರಿಂದ 9 ಗಂಟೆಯವರೆಗೆ ಈ ಪ್ರತಿಭಟನೆ ನಡೆಯಲಿದೆ. ಹದಗೆಟ್ಟ ರಸ್ತೆಯಿಂದ ತೊಂದರೆ ಅನುಭವಿ ಸುತ್ತಿರುವ ಎಲ್ಲಾ ಸಾರ್ವಜನಿ ಕರು ಪ್ರತಿಭಟನೆಯಲ್ಲಿ ಭಾಗವಹಿಸಿ, ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ. ಮಾಹಿತಿಗಾಗಿ ಡಾ.ಪಿ.ವಿ. ಭಂಡಾರಿ (ಮೊಬೈಲ್:9242124621) ಇವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗದಿದ್ದರೆ, ಹೋರಾಟವನ್ನು ಮುಂದುವರೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News