ನೇಜಾರು ತಾಯಿ ಮಕ್ಕಳ ಹತ್ಯೆ ಪ್ರಕರಣ: 69 ಸಾಕ್ಷಿಗಳ ವಿಚಾರಣೆ ಪೂರ್ಣ
ಪ್ರವೀಣ್ ಚೌಗುಲೆ
ಉಡುಪಿ, ಅ.29: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಒಟ್ಟು 69 ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ಪೂರ್ಣಗೊಂಡಿದೆ.
ಈವರೆಗೆ ಒಟ್ಟು 69 ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಮುಗಿದಿದ್ದು, ಒಂದು ಸಾಕ್ಷಿಯ ಮುಖ್ಯ ವಿಚಾರಣೆ ನಡೆದರೂ ಪಾಟಿ ಸವಾಲು ಬಾಕಿ ಇದೆ. ಉಳಿದಂತೆ ನ.5 ಮತ್ತು ನ.11ರಂದು 14 ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕ ನಿಗದಿ ಪಡಿಸಿ ಆದೇಶ ನೀಡಿದೆ.
ಸಾಕ್ಷಿಗಳ ಮುಖ್ಯ ವಿಚಾರಣೆಯನ್ನು ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ನಡೆಸಿದರೆ, ಆರೋಪಿ ಪರ ವಕೀಲ ರಾಜು ಪೂಜಾರಿ ಪಾಟಿಸವಾಲು ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಜೈಲಿನಲ್ಲಿ ಇರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗುತ್ತಿದೆ.