×
Ad

ಉಡುಪಿ: ಸಹಕಾರಿ-70ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಉದ್ಘಾಟನೆ

Update: 2023-11-15 16:09 IST

ಉಡುಪಿ, ನ.15: ದೇಶದ ಆರ್ಥಿಕತೆ ಹಾಗೂ ಅಭಿವೃದ್ಧಿ ಹೊಂದಲು ಸಹಕಾರಿ ಕೇತ್ರ ಒಂದು ಶಕ್ತಿಯಾಗಿದೆ. ಸಹಕಾರಿ ವ್ಯವಸ್ಥೆಯಲ್ಲಿ ಹಲವು ಬದಲಾವಣೆಯಾಗಿದೆ. ಬ್ಯಾಂಕಿಂಗ್ ಕ್ಷೇತ್ರ ಇಂದು ದೊಡ್ಡ ಶಕ್ತಿಯಾಗಿ ಬೆಳೆದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಎಲ್ಐಸಿ ಎಂಪ್ಲಾಯಿಸ್ ಕೋ -ಆಪರೇಟಿವ್ ಬ್ಯಾಂಕ್ ಉಡುಪಿ, ಟೀಚರ್ ಕೋ -ಆಪರೇಟಿವ್ ಬ್ಯಾಂಕ್ ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಮದರ್ ಸೊರೋಸ್ ಚರ್ಚ್ನ ಲಿಕೋ ಬ್ಯಾಂಕ್ ಗೋಲ್ಡನ್ ಜ್ಯುಬಿಲಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 70ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಉದ್ಧಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು.

ಈ ಸಂದರ್ಭದಲ್ಲಿ ಸಹಕಾರಿ ಬ್ಯಾಕಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರನ್ನು ಗೌರವಿಸಲಾಯಿತು

ಮೂಡುಬಿದಿರೆ ದವಳಾ ಕಾಲೇಜು ಉಪನ್ಯಾಸಕ ಸಂತೋಷ ಶೆಟ್ಟಿ ದಿಕ್ಸೂಚಿ ಭಾಷಣಗೈದರು.

ಮುಖ್ಯ ಅತಿಥಿಗಳಾಗಿ ಎಲ್ಲೈಸಿ ಎಂಪ್ಲಾಯಿಸ್ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಕೃಷ್ಣ, ಟೀಚರ್ ಕೋ -ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ., ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾದ್ಯಕ್ಷ ವಿಶ್ವನಾಥ ಶೆಟ್ಟಿ, ಲಿಕೋ ಬ್ಯಾಂಕ್ ಉಪಾಧ್ಯಕ್ಷ ದಯಾನಂದ ಎ., ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಸಿ.ಇ.ಒ ಮಂಜುನಾಥ್ ಶೆಟ್ಟಿ, ಸಹಕಾರಿ ಯೂನಿಯನ್ ನಿರ್ದೇಶಕರಾದ ಅಲೆವೂರು ಹರೀಶ್ ಕಿಣಿ, ಶಂಕರ ಪೂಜಾರಿ ಕಟಪಾಡಿ,, ಮನೋಜ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಶ್ರೀಧರ್ ಪಿ.ಎಸ್. ಸ್ವಾಗತಿಸಿದರು. ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಲಿಕೋ ಬ್ಯಾಂಕ್ ಸಿ.ಇ.ಒ ಶಶಿಕಲಾ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News