ಉಡುಪಿ: ಮೇ 9ರಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ
Update: 2025-05-08 20:50 IST
ಉಡುಪಿ, ಮೇ 8: ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಕರನ್ನು ನೈತಿಕ ಸ್ಥೈರ್ಯವನ್ನು ಬಲಪಡಿಸುವ ದೃಷ್ಟಿಯಿಂದ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರ ಸೂಚನೆಯಂತೆ ಮೇ 9ರಂದು ಉಡುಪಿ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಉಡುಪಿ ಜಿಲ್ಲಾ ವಕ್ಫ್ ಅಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಮಸೀದಿಗಳ ಖತೀಬ್ ಇಮಾಮ್‌ಗಳು ಶುಕ್ರವಾರದ ಜುಮ್ಮಾ ನಮಾಝಿನ ಬಳಿಕ ದೇಶದ ಶಾಂತಿ ಸೌಹಾರ್ದತೆಗಾಗಿ ಮತ್ತು ಭಾರತೀಯ ಸೇನೆಯ ಸೈನಿಕರನ್ನು ಬಲಪಡಿಸುವ ಸಲುವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.