ಬಂಟಕಲ್ಲು ರಕ್ತದಾನ ಶಿಬಿರ: 95 ಯುನಿಟ್ ರಕ್ತ ಸಂಗ್ರಹ
ಶಿರ್ವ, ಡಿ.3: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ಯುವ ರೆಡ್ ಕ್ರಾಸ್ ಘಟಕ, ರೋಟರ್ಯಾಕ್ಟ್ ಕ್ಲಬ್, ರೆಡ್ ರಿಬ್ಬನ್ ಕ್ಲಬ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿ, ಬ್ಲಡ್ ಸೆಂಟರ್ ಕುಂದಾಪುರ, ಆರೋಗ್ಯ ಮತ್ತು ಕುಟುಂಬ ಯೋಜನೆಯ ಮೂಲಕ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಿಸುವ ಇಲಾಖೆ, ಉಡುಪಿ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಕುಂದಾಪುರ ಸಹಯೋಗ ದೊಂದಿಗೆ ರಕ್ತದಾನ ಶಿಬಿರವನ್ನು ಶನಿವಾರ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎಸ್. ಜಯಕರ ಶೆಟ್ಟಿ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಮಾತನಾಡಿದರು.
ಎಚ್‌ಡಿಎಫ್‌ಸಿ ಬ್ಯಾಂಕ್ ಕುಂದಾಪುರ ಶಾಖಾ ಕಾರ್ಯನಿರ್ವಾಹಕ ಪ್ರಸನ್ನ ಕುಮಾರ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಖಜಾಂಚಿ ಶಿವರಾಮ ಶೆಟ್ಟಿ, ಸಂಸ್ಥೆಯ ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಡೀನ್ ಸುದರ್ಶನ್ ರಾವ್, ಎಂಬಿಎ ವಿಭಾಗದ ನಿರ್ದೇಶಕ ಡಾ.ಸೂರಜ್, ಉದ್ಯೋಗ ಮತ್ತು ತರಬೇತಿ ಅಧಿಕಾರಿ ಡಾ.ಸಿ.ಕೆ.ಮಂಜುನಾಥ್, ಎನ್‌ಎಸ್‌ಎಸ್ ಯುವ ರೆಡ್ ಕ್ರಾಸ್ ಘಟಕ, ರೋಟರ್ಯಾಕ್ಟ್ ಕ್ಲಬ್‌ನ ಸಂಯೋಜಕ ನಾಗರಾಜ್ ರಾವ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಆದಿತ್ಯ ಪ್ರಕಾಶ್ ಸ್ವಾಗತಿಸಿದರು. ರಮ್ಯ ದೇಶಪಾಂಡೆ ಕಾರ್ಯಕ್ರಮ ನಿರೂಪಿಸಿದರು. ಚಂದನ ವಂದಿಸಿದರು. ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸೇರಿ 100ಕ್ಕೂ ಹೆಚ್ಚು ಸ್ವಯಂ ಸೇವಕರು ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 95 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.