×
Ad

ನ.1: ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ

Update: 2024-10-28 20:33 IST

ಉಡುಪಿ, ಅ.28: ಉಡುಪಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿ, ಕನ್ನಡ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರು, ಶಾಸಕರೊಂದಿಗೆ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ,ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹಾಗೂ ಇತರರು ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 7:15ಕ್ಕೆ ನಗರದ ಭುಜಂಗ ಪಾರ್ಕ್‌ನಲ್ಲಿ ಹಲ್ಮಿಡಿ ಶಾಸನ ಪ್ರತಿಕೃತಿ ಉದ್ಘಾಟನೆ, 7:55ಕ್ಕೆ ಬೋರ್ಡ್ ಹೈಸ್ಕೂಲ್‌ ನಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News