×
Ad

ಸೆ.1ರ ’ಧರ್ಮಸ್ಥಳ ಚಲೋ’ ಅಭಿಯಾನಕ್ಕೆ ಉಡುಪಿಯಿಂದ 15,000 ಮಂದಿ ಭಾಗಿ: ಕುತ್ಯಾರು ನವೀನ್ ಶೆಟ್ಟಿ

Update: 2025-08-30 18:41 IST

ಉಡುಪಿ, ಆ.30: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬ ಆಗ್ರಹದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ನಡೆಯಲಿರುವ ರಾಜ್ಯ ಮಟ್ಟದ ’ಧರ್ಮಸ್ಥಳ ಚಲೋ’ ಅಭಿಯಾನ ದಲ್ಲಿ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 15,000ಕ್ಕೂ ಮಿಕ್ಕಿ ಪಕ್ಷದ ಪದಾಧಿಕಾರಿ ಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉಭಯ ಜಿಲ್ಲೆಗಳಿಂದ ಗರಿಷ್ಠ ಸಂಖ್ಯೆಯ ಪದಾಧಿಕಾರಿಗಳು, ಕಾರ್ಯ ಕರ್ತರು ಮತ್ತು ಭಕ್ತಾಭಿಮಾನಿಗಳು ’ಧರ್ಮಸ್ಥಳ ಚಲೋ’ ಅಭಿಯಾನದಲ್ಲಿ ಪಾಲ್ಗೊಳ್ಳಲು ಸಜ್ಜುಗೊಳಿಸುವಂತೆ ಸಭೆಯಲ್ಲಿ ನಿರ್ಣಯಿಸ ಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News