×
Ad

ಅ.10ರಂದು ಉಡುಪಿ ಪತ್ರಿಕಾಭವನದ ಪಾರ್ಕಿಂಗ್-ರೂಫಿಂಗ್ ವ್ಯವಸ್ಥೆ ಉದ್ಘಾಟನೆ

Update: 2023-10-08 18:09 IST

ಉಡುಪಿ, ಅ.8: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಜತ ಮಹೋತ್ಸವ ಸುಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿರುವ ಉಡುಪಿ ಪತ್ರಿಕಾ ಭವನದ ನೂತನ ಪಾರ್ಕಿಂಗ್ ಮತ್ತು ರೂಫಿಂಗ್ ವ್ಯವಸ್ಥೆಯ ಉದ್ಘಾಟನಾ ಕಾರ್ಯಕ್ರಮ ಅ.10ರಂದು ಬೆಳಗ್ಗೆ 11ಗಂಟೆಗೆ ಪತ್ರಿಕಾ ಭವನದಲ್ಲಿ ಜರಗಲಿದೆ.

ನೂತನ ಪಾರ್ಕಿಂಗ್ ಮತ್ತು ರೂಫಿಂಗ್ ವ್ಯವಸ್ಥೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು. ಬಳಿಕ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಇದೇ ಸಂದರ್ಭದಲ್ಲಿ ಪತ್ರಿಕಾ ಭವನಕ್ಕೆ ನೆರವು ನೀಡಿದ ದಾನಿಗಳಿಗೆ ಗೌರವ ಸಲ್ಲಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News