×
Ad

ಅ.10: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ಕಾರ್ಡ್ ವಿತರಣೆ

Update: 2025-10-08 21:10 IST

ಉಡುಪಿ, ಅ.8: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್‌ಕಾರ್ಡ್ ವಿತರಣೆಯನ್ನು ಅ.10ರಂದು ಬೆಳಗ್ಗೆ 11 ಗಂಟೆಗೆ ಅಜ್ಜರಕಾಡಿನಲ್ಲಿರುವ ಆರೂರು ಲಕ್ಮೀನಾರಾಯಣ್ ರಾವ್ ಸ್ಮಾರಕ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಉಪಸ್ಥಿತರಿದ್ದು ಸ್ಮಾರ್ಟ್‌ಕಾರ್ಡ್ ವಿತರಿಸಲಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಮಿಕ ಇಲಾಖೆ ಆಯುಕ್ತ ಎಚ್.ಎನ್ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಇತರರು ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News