ಜು.10ರಂದು ನೇರ ಸಂದರ್ಶನ
Update: 2026-07-07 20:06 IST
ಉಡುಪಿ, ಜು.7: ಉಡುಪಿಯ ವಿ.ಪಿ.ನಗರದ ಸುಧಾ ಫರ್ನೀಚರ್ಸ್ ಬಿಲ್ಡಿಂಗ್ ಎದುರಿನ ವಿ2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10 ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆ ಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.