×
Ad

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2025-08-31 21:46 IST

ಉಡುಪಿ, ಆ.31: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದಕ್ಕೆ ಕಳೆದ 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗದಗ ಜಿಲ್ಲೆಯ ನರಗುಂದ ಮಾರುತಿನಗರದ ಸಂಜು ಪತ್ತಾರ್ ಯಾನೆ ಸಂಜು ಬಡಿಗೇರ್(36) ಬಂಧಿತ ಆರೋಪಿ. ಈ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 11 ವರ್ಷಗಳಿಂದ ತಲೆಮಾರೆಸಿಕೊಂಡಿದ್ದು, ಖಚಿತ ಮಾಹಿತಿ ಮೇರೆಗೆ ಉಡುಪಿ ನಗರ ಠಾಣೆಯ ಸಿಬ್ಬಂದಿ ರಾಘವೇಂದ್ರ, ಆನಂದಯ್ಯ ಎಂಬವರು ಬೆಳಗಾಂನ ಅನಗೋಳಿಯ ಅಂಬೇಡ್ಕರ್ ಗಲ್ಲಿ ಎಂಬಲ್ಲಿ ಆ.30ರಂದು ವಶಕ್ಕೆ ಪಡೆದು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News