×
Ad

ಸೆ.11: ಅರಣ್ಯ ಇಲಾಖೆಯಿಂದ ಬೃಹತ್ ರಕ್ತದಾನ ಶಿಬಿರ

Update: 2025-09-06 21:51 IST

ಉಡುಪಿ, ಸೆ.6: ಉಪವಲಯ ಅರಣ್ಯಾಧಿಕಾರಿಗಳ ಸಂಘ, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ, ರಕ್ತನಿಧಿ ಕೇಂದ್ರ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಮತ್ತು ಐಎಂಎ ಉಡುಪಿ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ 25ನೇ ವರ್ಷದ ಬೃಹತ್ ರಕ್ತದಾನ ಶಿಬಿರವೊಂದು ಸೆ.11ರಂದು ಬೆಳಗ್ಗೆ 11 ಗಂಟೆಗೆ ನಗರದ ಐಎಂಎ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್ ಎ ಸುವರ್ಣ ಉದ್ಘಾಟಿಸಲಿದ್ದು, ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಎಂ, ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಎಂ, ಜಿಲ್ಲಾ ಸರ್ಜನ್ ಡಾ.ನಿತ್ಯಾನಂದ ನಾಯಕ್, ಐಎಂಎ ಅಧ್ಯಕ್ಷ ಡಾ.ಕಲ್ಯಾ ಸುರೇಶ್ ಶೆಣೈ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ಹೆಚ್. ದೇವರಾಜ ಪಾಣ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News