ಆ.11ರಂದು ಶಿರ್ವದಲ್ಲಿ ಅನುಸ್ಮರಣಾ ಸಂಗಮ
ಶಿರ್ವ, ಆ.7: ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಉಡುಪಿ ಜಿಲ್ಲೆ ಇದರ ವತಿಯಿಂದ ಆಧ್ಯಾತ್ಮಿಕ ಗುರು ತಾಜುಲ್ ಉಲಮಾ ಉಳ್ಳಾಲ ತಂಙಳ್ ಹಾಗೂ ಉಡುಪಿ ಜಿಲ್ಲಾ ಖಾಝಿಯಾಗಿದ್ದ ತಾಜುಲ್ ಫುಖಹಾ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಅವರ ಅನುಸ್ಮರಣಾ ಸಂಗಮವು ಆ.11ರಂದು ಬೆಳಿಗ್ಗೆ 10 ಗಂಟೆಗೆ ಶಿರ್ವ ಸುನ್ನೀ ಜಾಮಿಯಾ ಮಸೀದಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವು ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ನೇತೃತ್ವದಲ್ಲಿ ನಡೆಯಲಿದ್ದು, ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ. ಅಬೂಬಕ್ಕರ್ ನೇಜಾರು ಅಧ್ಯಕ್ಷತೆ ವಹಿಸಲಿರುವರು.
ನಾಯಿಬ್ ಖಾಝಿ ಬಿ.ಕೆ.ಅಬ್ದುರ‌್ರಹ್ಮಾನ್ ಮದನಿ ಮೂಳೂರು ಉದ್ಘಾಟಿಸಲಿರುವರು. ವಾಗ್ಮಿ ಎಮ್ಮೆಸ್ಸೆಮ್ ಅಬ್ದುರ‌್ರಶೀದ್ ಝೈನಿ ಕಾಮಿಲ್ ಅನುಸ್ಮರಣಾ ಭಾಷಣ ಮಾಡಲಿರುವರು. ಉಡುಪಿ ಜಿಲ್ಲಾ ಉಲಮಾ ಒಕ್ಕೂಟದ ಅಧ್ಯಕ್ಷ ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಶಿರ್ವ ಮಸೀದಿಯ ಖತೀಬ್ ಸಿರಾಜುದ್ದೀನ್ ಝೈನಿ, ಜಮಾಅತ್ ಅಧ್ಯಕ್ಷ ಝುಬೈರ್ ಅಹ್ಮದ್ ಅಲಿ, ಜಿಲ್ಲಾ ಸುನ್ನೀ ಕೋ-ಆರ್ಡಿನೇಷನ್ ಅಧ್ಯಕ್ಷ ಕೆ.ಎ.ಅಬ್ದುರ‌್ರಹ್ಮಾನ್ ರಝ್ವಿ ಅಲ್ ಫುರ್ಖಾನಿ ಕಲ್ಕಟ್ಟ ಭಾಗವಹಿಸಲಿರುವರು ಎಂದು ಸಂಯುಕ್ತ ಜಮಾಅತ್ ಕಾರ್ಯದರ್ಶಿ ಹಾಜಿ ಎಂ.ಎ.ಬಾವು ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.