ಜೂ.12ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ: ಡಿಸಿ ವಿದ್ಯಾಕುಮಾರಿ
ಡಾ.ಕೆ.ವಿದ್ಯಾಕುಮಾರಿ
ಉಡುಪಿ, ಜೂ.11: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.12ರಂದು (ಗುರುವಾರ) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸ ಲಾಗಿದೆ.
ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಜಿಲ್ಲೆಯಲ್ಲಿ ಆಗಾಗ ಮಳೆ ಸುರಿಯುತಿದ್ದರೂ, ಇಂದು ಸಂಜೆಯ ಬಳಿಕ ಮಳೆಯ ಬಿರುಸು ಹೆಚ್ಚಾಗಿದ್ದು, ಗುರುವಾರದಿಂದ ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಆದರೆ ಪದವಿ ಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.