ಜೂ.12ರಂದು ನೇರ ಸಂದರ್ಶನ
Update: 2026-06-09 20:48 IST
ಉಡುಪಿ, ಜೂ.9: ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಇಲ್ಲಿ ಜೂನ್ 12ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಡಿಪ್ಲೋಮಾ, ಐಟಿಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.