×
Ad

ಫೆ.13ರಿಂದ ಸಂಜೀವಿನಿ ವಸ್ತು ಪ್ರದರ್ಶನ, ಮಾರಾಟ ಮೇಳ

Update: 2025-02-11 20:37 IST

ಉಡುಪಿ, ಫೆ.11: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ - ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಹೆಬ್ರಿ, ಗ್ರಾಮ ಪಂಚಾಯತ್ ಹೆಬ್ರಿ ಹಾಗೂ ಹೆಬ್ಬೇರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ಬೇರಿ ಉತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಸಂಜೀವಿನಿ ಮಾರಾಟ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹೆಬ್ರಿ ರಾಮಮಂದಿರದ ಮುಂಭಾಗ ಫೆಬ್ರವರಿ 13ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿದೆ.

ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಹೆಬ್ರಿ ಹನಿ ಇತ್ಯಾದಿ ಉತ್ಪನ್ನಗಳು ಲಭ್ಯವಿರುತ್ತದೆ.

ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೀವಿನಿ ಮಹಿಳೆಯರು, ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸುವಂತೆ ಹೆಬ್ರಿ ತಾಲೂಕು ಪಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News