×
Ad

ಫೆ.13ರಂದು ಉಡುಪಿ ನೇತ್ರಜ್ಯೋತಿ ಕಾಲೇಜಿನ ಘಟಿಕೋತ್ಸವ

Update: 2025-02-11 21:27 IST

ಉಡುಪಿ, ಫೆ.11: ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿಯ ಸಹಸಂಸ್ಥೆ ನೇತ್ರಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ನೇತ್ರಜ್ಯೋತಿ ಕಾಲೇಜ್ ಆಫ್ ಪಾರಾಮೆಡಿಕಲ್ ಸೈನ್ಸಸ್ ಇದರ ಘಟಿಕೋತ್ಸವ ಹಾಗೂ ನೂತನ ಸ್ನಾತಕೋತ್ತರ ಪದವಿ ಸೆಂಟರ್‌ನ ಉದ್ಘಾಟನೆ ಕಾರ್ಯಕ್ರಮ ಫೆ.13ರಂದು ಕಿನ್ನಿಮುಲ್ಕಿ ವೇಗಾಸ್ ಟೌನ್‌ಶಿಪ್‌ನಲ್ಲಿರುವ ಕಾಲೇಜು ಆವರಣದಲ್ಲಿ ನಡೆಯಲಿದೆ.

ಘಟಿಕೋತ್ಸವದಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಮತ್ತು ಹೊಸ ಪಿ.ಜಿ ಸೆಂಟರ್‌ನ್ನು ಉದ್ಘಾಟಿಸಲಿರುವರು. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿರು ವರು. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಹೆ, ಪ್ರೊ. ಛಾನ್ಸೆಲರ್ ಡಾ.ಎಚ್.ಎಸ್.ಬಲ್ಲಾಳ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ರಾಜೀವ ಗಾ0ಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ಯು.ಟಿ.ಇಫ್ತಿಕರ್ ಅಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News