ಜೂ.13ಕ್ಕೆ ರೈಲ್ವೆ ಸಚಿವ ಸೋಮಣ್ಣ ಉಡುಪಿಗೆ
ಉಡುಪಿ, ಜೂ.10: ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಜೂ.13ರ ಶುಕ್ರವಾರ ಉಡುಪಿಗೆ ಆಗಮಿಸಲಿದ್ದಾರೆ. ಅಪರಾಹ್ನ 12 ಗಂಟೆಗೆ ಉಡುಪಿಗೆ ಆಗಮಿಸುವ ಸಚಿವರು 12:30ಕ್ಕೆ ಉಡುಪಿ ಇಂದ್ರಾಳಿಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಅಪರಾಹ್ನ 2:15ಕ್ಕೆ ಉಡುಪಿಯಿಂದ ಕುಂದಾಪುರಕ್ಕೆ ತೆರಳುವ ವಿ.ಸೋಮಣ್ಣ, 3:00ಕ್ಕೆ ಕುಂದಾಪುರ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣ ನಿಲ್ದಾಣಕ್ಕೆ ಭೇಟಿಯಿತ್ತು ಲಯನ್ಸ್ ಕ್ಲಬ್ ಹಂಗಳೂರು ಇವರ ವತಿಯಿಂದ 60.00 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನವೀಕರಣಗೊಂಡ ಕುಂದಾಪುರ ರೈಲ್ವೇ ಸ್ಟೇಷನ್‌ನ ಪ್ಲಾಟ್ ಫಾರ್ಮ್, ನೂತನ ಛಾವಣಿ ಮತ್ತು ಉದ್ಯಾನವನ ಸುಂದರೀಕರಣ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಈ ಭಾಗದ ರೈಲ್ವೆ ಸೇವೆಯನ್ನು ಹೆಚ್ಚಿಸಲು ಸ್ಥಳೀಯ ಸಂಸದರು ಮತ್ತು ಶಾಸಕರೊಂದಿಗೆ ಚರ್ಚಿಸಿ, ಸಂಜೆ 5:15ಕ್ಕೆ ಕುಂದಾಪುರದಿಂದ ಮಂಗಳೂರು ವಿಮಾನನಿಲ್ದಾಣಕ್ಕೆ ತೆರಳುವರು ಎಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.