ಜೂ.13ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ
Update: 2025-06-12 21:43 IST
ಉಡುಪಿ, ಜೂ.11: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.13ರಂದು (ಶುಕ್ರವಾರ) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಆದರೆ ಪದವಿ ಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.