ಕುಂದಾಪುರ, ಸೆ.3: ಉಡುಪಿ ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಕುಂದಾಪುರ ಹಾಗೂ ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ.13ರಂದು ಬೆಳಗ್ಗೆ 9ಗಂಟೆಗೆ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಭಾಗವಹಿಸುವವರಿಗೆ ಆಧಾರ್ ಕಾರ್ಡ್ ಕಡ್ಡಾಯ ವಾಗಿದ್ದು, ಒಬ್ಬರಿಗೆ 2 ವೈಯಕ್ತಿಕ ಹಾಗೂ 1 ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ತಾಲೂಕು ಮಟ್ಟದಲ್ಲಿ ವೈಯಕ್ತಿಕದಲ್ಲಿ ಪ್ರಥಮ, ದ್ವಿತೀಯ ಸ್ಥಾನಿಗಳಿಗೆ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಗಳಿಗೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಸಿಗಲಿದೆ.

ಸೆ.12 ರಂದು ಕೆಪಿಎಸ್ ಕೋಟೇಶ್ವರ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯಾಟ ನಡೆಯಲಿದೆ. ಭಾಗವಹಿಸುವ ಕ್ರೀಡಾಪಟುಗಳು https://www.dasaracmcup.in| ಮೂಲಕ ನೋಂದಣಿ ಮಾಡಿಕೊಳ್ಳ ಬಹುದು. ಹೆಚ್ಚಿನ ಮಾಹಿತಿಗೆ ಕುಂದಾಪುರದ ಸಹಾಯಕ ಯುವ ಜನ ಸೇವಾ ಕ್ರೀಡಾಧಿಕಾರಿ ಸತ್ಯನಾರಾಯಣ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor