ಸೆ.13,14: ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ
ಉಡುಪಿ, ಸೆ.6: ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ವೆಯ್ಟ್‌ಲಿಫ್ಟಿಂಗ್, ನೆಟ್‌ಬಾಲ್, ಬಾಕ್ಸಿಂಗ್, ಕುಸ್ತಿ ಹಾಗೂ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ಸೆ.13ರಂದು ಮತ್ತು ವಾಲಿಬಾಲ್ ಹಾಗೂ ಬಾಸ್ಕೆಟ್‌ಬಾಲ್ ಸ್ಪರ್ಧೆಗಳು ಸೆ.14ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ.
ಉಡುಪಿ ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಹೊಂದಿವೆ. ಜಿಲ್ಲೆ ಯಿಂದ ಭಾಗವಹಿಸುವ ಕ್ರೀಡಾಪಟುಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿದ ಗುರುತಿನ ಚೀಟಿ ಹಾಗೂ ಇತರ ದಾಖಲೆಗಳೊಂದಿಗೆ ನಿಗದಿತ ದಿನದಂದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದು.
ಚಿಕ್ಕಮಗಳೂರಿನಲ್ಲಿ ಜೂಡೋ:ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಜೂಡೋ ಮತ್ತು ಟೇಕ್ವಾಂಡೋ ಆಯ್ಕೆ ಸ್ಪರ್ಧೆಗಳು ಸೆ.11 ರಂದು ಚಿಕ್ಕಮಗಳೂರಿನ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿವೆ. ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳು ನೋಂದಣಿ ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳೊಂದಿಗೆ ನಿಗದಿತ ದಿನದ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂ: 0820-2521324ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.