×
Ad

ಜು.14ರಂದು ಶಕ್ತಿ ಯೋಜನೆಯ ಸಂಭ್ರಮ ಆಚರಣೆ

Update: 2025-07-12 21:32 IST

ಉಡುಪಿ, ಜು.12: ರಾಜ್ಯ ಸರಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಪ್ರಯಾಣದ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿದ್ದು, ಸರಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯ ಸಂಭ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಆಚರಿಸುತ್ತಿದೆ.

ಅದರಂತೆ ಉಡುಪಿ ಜಿಲ್ಲೆಯ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಜು.14ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿಯ ಬನ್ನಂಜೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಪೂಜೆ ಹಾಗೂ ಸಾರ್ವಜನಿಕರಿಗೆ ಸಹಿ ಹಂಚುವ ಮೂಲಕ ಸಂಭ್ರಮಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳು, ಸದಸ್ಯರುಗಳು, ವಿವಿಧ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News