×
Ad

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಆರೋಪಿಯ ಬಂಧನ

Update: 2025-08-18 20:52 IST

ಉಡುಪಿ, ಆ.18: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಆ.17ರಂದು ಬಂಧಿಸಿದ್ದಾರೆ.

ಮಂಗಳೂರು ಜಪ್ಪು ಮಾರ್ಕೆಟ್ ನಿವಾಸಿ ಸಮೀರ್ ಬಂಧಿತ ಆರೋಪಿ. 2011ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸಮೀರ್‌ನನ್ನು ಮಲ್ಪೆ ಎಸ್ಸೈ ಅನೀಲ್ ಕುಮಾರ ಹಾಗೂ ಸಿಬ್ಬಂದಿ ಸುರೇಶ್, ವಿಶ್ವನಾಥ, ಕುಬೇರ ಎಂಬವರು ಮಂಗಳೂರಿನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News