ಜು.14: ಸೇಡಿಯಾಪು ಪ್ರಶಸ್ತಿ ಪ್ರದಾನ
ಉಡುಪಿ, ಜು.11: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮಣಿಪಾಲ ಜಂಟಿಯಾಗಿ ವಿದ್ವಾಂಸ ಸೇಡಿಯಾಪು ಕೃಷ್ಣ ಭಟ್ಟರ ಹೆಸರಿನಲ್ಲಿ ಕನ್ನಡದ ಹಿರಿಯ ವಿದ್ವಾಂಸರಿಗೆ ಪ್ರತಿವರ್ಷ ನೀಡುವ ಸೇಡಿಯಾಪು ಪ್ರಶಸ್ತಿ ಯನ್ನು ಈ ಬಾರಿ ಮೈಸೂರಿನ ಹಿರಿಯ ಸಾಹಿತಿ ಹಾಗೂ ಸಂಶೋಧಕಿ ಡಾ.ಟಿ.ಎನ್.ನಾಗರತ್ನ ಅವರಿಗೆ ಪ್ರದಾನ ಮಾಡಲಾಗುವುದು.
ಪ್ರಶಸ್ತಿ ಪ್ರದಾನ ಸಮಾರಂಭವು ಜು.14ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಸರಸ್ವತಿಪುರಂನ ಕಾಮಾಕ್ಷಿ ಆಸ್ಪತ್ರೆ ರಸ್ತೆಯಲ್ಲಿರುವ ಪ್ರಶಸ್ತಿ ಪುರಸ್ಕೃತರ ಮನೆಯಲ್ಲಿ (128, 11ನೇ ಮುಖ್ಯ ರಸ್ತೆ) ನೀಡಿ ಗೌರವಿಸಲಾ ಗುವುದು ಎಂದು ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
ಸಮಾರಂಭದ ಅಧ್ಯಕ್ಷತೆ ವಹಿಸುವ ಹಿರಿಯ ವಿದ್ವಾಂಸ ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಶ್ರಾಂತ ಪ್ರಾಚಾರ್ಯ ಡಾ.ಪಾದೇಕಲ್ಲು ವಿಷ್ಣು ಭಟ್ಟ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ಡಾ.ಶೆಟ್ಟಿ ತಿಳಿಸಿದ್ದಾರೆ.