ಆ.14ರಂದು ಗ್ರಂಥಪಾಲಕರ ದಿನಾಚರಣೆ ‘ಗ್ರಂಥಾಲಯದಲ್ಲಿ ನಮ್ಮ ಸಾಹಿತಿ’ ಕಾರ್ಯಕ್ರಮ

Update: 2026-08-11 21:53 IST

ಉಡುಪಿ, ಆ.11: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ಆಶ್ರಯದಲ್ಲಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದೊಂದಿಗೆ ಗ್ರಂಥಪಾಲಕರ ದಿನಾಚರಣೆ ಹಾಗೂ ಗ್ರಂಥಾಲಯದಲ್ಲಿ ನಮ್ಮ ಸಾಹಿತಿ ವಿಶೇಷ ಸಂವಾದ ಕಾರ್ಯಕ್ರಮ ಆಗಸ್ಟ್ 14ರಂದು ಸಂಜೆ 4 ಗಂಟೆಗೆ ಅಜ್ಜರಕಾಡು ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಗ್ರಂಥಾಲಯದಲ್ಲಿ ನಮ್ಮ ಸಾಹಿತಿ ಎಂಬ ವಿಷಯದಡಿ ಪ್ರಸಿದ್ಧ ಸಾಹಿತಿ, ಕುಂದಾಪುರದ ಡಾ. ಪಾರ್ವತಿ ಜಿ. ಐತಾಳ್‌ರೊಂದಿಗೆ ಸಂವಾದ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್‌ನ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಭಾಗವಹಿಸಲಿದ್ದಾರೆ. ಸಾಹಿತ್ಯಾಭಿಮಾನಿಗಳು, ಗ್ರಂಥಾಲಯ ಪ್ರೇಮಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News