ಉಡುಪಿ, ನ.11:ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳ ನೇತೃತ್ವದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ನವೆಂಬರ್ 14ರಂದು ನಡೆಯಲಿವೆ.

ಆದಿನ ಬೆಳಗ್ಗೆ 10 ಗಂಟೆಗೆ ಹೆಬ್ರಿಯ ಶಿವಪುರ ಗ್ರಾಮದ ಶ್ರೀಶಂಕರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ, ಬೈಂದೂರು ತಾಲೂಕು ಹೇರೂರು ಗ್ರಾಮದ ಮೇಕೋಡು ಅಮ್ಮ ಸಭಾಭವನದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಅಲ್ಲದೇ ಬ್ರಹ್ಮಾವರದ ಹಾರಾಡಿ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ, ಅಲೆವೂರು ಗ್ರಾಮದ ಗುಡ್ಡೆಅಂಗಡಿ ಸಂಕಲ್ಪ ಸಬಾಭವನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಹಾಗೂ ಅಂದು ಅಪರಾಹ್ನ 2:30ಕ್ಕೆ ಕುಂದಾಪುರ ತಾಲೂಕು ಬಳ್ಕೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.

ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor